alex Certify ರಾಜ್ಯದಲ್ಲಿ ‘ಕೋವಿಡ್’ ತಪಾಸಣೆ ತೀವ್ರಗೊಳಿಸಲು ಕ್ರಮ : ಡಿ.23 ರಿಂದ ಪ್ರತಿದಿನ 5 ಸಾವಿರ ‘ಕೊರೊನಾ ಟೆಸ್ಟಿಂಗ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದಲ್ಲಿ ‘ಕೋವಿಡ್’ ತಪಾಸಣೆ ತೀವ್ರಗೊಳಿಸಲು ಕ್ರಮ : ಡಿ.23 ರಿಂದ ಪ್ರತಿದಿನ 5 ಸಾವಿರ ‘ಕೊರೊನಾ ಟೆಸ್ಟಿಂಗ್’

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ತಪಾಸಣೆ ತೀವ್ರಗೊಳಿಸಲು ರಾಜ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಡಿ.23 ರಿಂದ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ ನಡೆಸಲಿ ನಿರ್ಧರಿಸಿದೆ.

ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯದಲ್ಲಿ ಕೋವಿಡ್ ತಪಾಸಣೆ ತೀವ್ರಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಶನಿವಾರದಿಂದ ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪರೀಕ್ಷೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಜಗತ್ತಿನಾದ್ಯಂತ ಕೊರೊನಾ ಮತ್ತೆ ಉಲ್ಬಣಿಸುತ್ತಿದೆ. ರಾಜ್ಯದಲ್ಲಿ ಕೊವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತರಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ. ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿ ಪಾಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕೂಡ ಮನವಿ ಮಾಡಿದ್ದಾರೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...