alex Certify ಮಥುರಾ – ವೃಂದಾವನದ 10 ಚದರ ಕಿ.ಮೀ ಪ್ರದೇಶದಲ್ಲಿ ಮದ್ಯ – ಮಾಂಸ ಮಾರಾಟ ನಿಷೇಧ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಥುರಾ – ವೃಂದಾವನದ 10 ಚದರ ಕಿ.ಮೀ ಪ್ರದೇಶದಲ್ಲಿ ಮದ್ಯ – ಮಾಂಸ ಮಾರಾಟ ನಿಷೇಧ

ನೋಯ್ಡಾ: ಉತ್ತರ ಪ್ರದೇಶದ ವೃಂದಾವನ – ಮಥುರಾದ 10 ಚದರ ಕಿ.ಮೀ. ಪ್ರದೇಶದಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಮದ್ಯ ಹಾಗೂ ಮಾಂಸ ಮಾರಾಟವನ್ನು ನಿಷೇಧಿಸಲಾಗುವುದು ಎಂದು ಯುಪಿ ಸರಕಾರ ಘೋಷಿಸಿದೆ. ಗಣೇಶ ಹಬ್ಬ ಆಚರಣೆಗೂ ಮುನ್ನವೇ ಸಿಎಂ ಯೋಗಿ ಆದಿತ್ಯನಾಥ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.

ಮದ್ಯ – ಮಾಂಸ ನಿಷೇಧಕ್ಕೆ ಯೋಜನೆಗಳನ್ನು ರೂಪಿಸಲು ಸಂಬಂಧಿತ ಅಧಿಕಾರಿಗಳಿಗೆ ಸಿಎಂ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ. ಅಲ್ಲದೆ ಇಂತಹ ವ್ಯಾಪಾರದಲ್ಲಿ ತೊಡಗಿರುವವರು ಇನ್ಮುಂದೆ ಬೇರೆ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಂತೆ ಸೂಚಿಸಲಾಗಿದೆ. ಶ್ರೀ ಕೃಷ್ಣನ ಜನ್ಮಸ್ಥಳವಾದ ಮಥುರಾ – ವೃಂದಾವನದ 10 ಚದರ ಕಿ.ಮೀ. ಪ್ರದೇಶವನ್ನು ತೀರ್ಥಕ್ಷೇತ್ರವೆಂದು ರಾಜ್ಯ ಸರಕಾರ ಘೋಷಿಸಿದೆ.

ವಿಚಿತ್ರ ಮೀನು ನೋಡಿ ದಂಗಾದ ನಾವಿಕರು….!

ಸರಕಾರದ ನಿರ್ಧಾರವನ್ನು ತಿಳಿಸುವಾಗ ಸಿಎಂ ಯೋಗಿಯು, ಮದ್ಯ – ಮಾಂಸದ ವ್ಯಾಪಾರದಲ್ಲಿ ತೊಡಗಿರುವವರು ಮಥುರಾ ವೈಭವವನ್ನು ಪುನರುಜ್ಜೀವನಗೊಳಿಸಲು ಹಾಲಿನ ಮಾರಾಟ ಮಾಡಬಹುದು ಎಂದು ಸಲಹೆ ನೀಡಿದ್ದಾರೆ. ಇದು ಬೃಹತ್ ಪ್ರಮಾಣದ ಹಾಲು ಉತ್ಪಾದನೆಗೆ ಹೆಸರುವಾಸಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...