‘ಈ ಟಿವಿ’ ಸಮೂಹ ಸಂಸ್ಥೆಗಳ ಮಾಲೀಕ ರಾಮೋಜಿ ರಾವ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 87 ವರ್ಷದ ರಾಮೋಜಿ ರಾವ್ ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
ಖ್ಯಾತ ನಿರ್ಮಾಪಕರೂ ಆಗಿದ್ದ ಅವರು ಹೈದರಾಬಾದಿನಲ್ಲಿ ರಾಮೋಜಿ ಫಿಲಂ ಸಿಟಿ ಸ್ಥಾಪಿಸುವ ಮೂಲಕ ಚಿತ್ರ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿ ಕೊಟ್ಟಿದ್ದರು. ರಾಮೋಜಿ ಫಿಲಂ ಸಿಟಿ ಪ್ರೇಕ್ಷಣೀಯ ಸ್ಥಳವಾಗಿ ಮಾತ್ರವಲ್ಲದೆ ‘ಬಾಹುಬಲಿ’ ಸೇರಿದಂತೆ ಹಲವು ಹೆಸರಾಂತ ಚಲನಚಿತ್ರಗಳು ಇಲ್ಲಿ ನಿರ್ಮಾಣವಾಗಿದ್ದವು.
ಮಾಧ್ಯಮ ಲೋಕದಲ್ಲಿ ತಮ್ಮ ಛಾಪು ಮೂಡಿಸಿದ್ದ ರಾಮೋಜಿ ರಾವ್ ‘ಈ ನಾಡು’ ಪತ್ರಿಕೆಯನ್ನು ಆರಂಭಿಸಿದ್ದು, ಇದು ಅತಿ ಹೆಚ್ಚು ಪ್ರಸಾರ ಹೊಂದಿರುವ ಹೆಗ್ಗಳಿಕೆ ಹೊಂದಿದೆ. ರಾಮೋಜಿ ರಾವ್ ಅವರ ನಿಧನಕ್ಕೆ ಹಲವು ಗಣ್ಯರು ತಮ್ಮ ಸಂತಾಪ ಸೂಚಿಸಿದ್ದಾರೆ.