ಬೆಂಗಳೂರು: ವೈದ್ಯಕೀಯ ಕೋರ್ಸ್ ಪ್ರವೇಶ ಶುಲ್ಕವನ್ನು ಶೇ. 10 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಇದರಿಂದಾಗಿ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಕಷ್ಟಸಾಧ್ಯವಾಗಲಿದೆ.
2022 – 23ನೇ ಸಾಲಿಗೆ ವೈದ್ಯಕೀಯ ಕೋರ್ಸ್ ಪ್ರವೇಶ ಶುಲ್ಕವನ್ನು ಶೇಕಡ 10 ರಷ್ಟು ಹೆಚ್ಚಳ ಮಾಡಲು ಸರ್ಕಾರ ಸಮ್ಮತಿಸಿದೆ. ಒಂದೆರಡು ದಿನಗಳಲ್ಲಿ ಸರ್ಕಾರದ ಆದೇಶ ಎಂದು ಹೇಳಲಾಗಿದೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳ ಒಕ್ಕೂಟ ಶೇಕಡ 15 ರಷ್ಟು ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದು, ಸರ್ಕಾರ ಶೇಕಡ 10 ರಷ್ಟು ಶುಲ್ಕ ಹೆಚ್ಚಳಕ್ಕೆ ತೀರ್ಮಾನಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅನುಮತಿಯೊಂದಿಗೆ ಅಂತಿಮ ಆಧಿಸೂಚನೆ ಹೊರಡಿಸಲು ವೈದ್ಯಕೀಯ ಶಿಕ್ಷಣ ಇಲಾಖೆ ತೀರ್ಮಾನಿಸಿದೆ ಎಂದು ಹೇಳಲಾಗಿದೆ.