ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ನ ಎರಡನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಬಯಸುವ ಅರ್ಹರಿಗೆ ಅವರ ರ್ಯಾಂಕ್ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ಮೂಲ ದಾಖಲೆ ಸಲ್ಲಿಸಲು ಡಿಸೆಂಬರ್ 6ರಿಂದ 17ರ ವರೆಗೆ ಅವಕಾಶ ಕಲ್ಪಿಸಲಾಗಿದೆ.
ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ಚಾಯ್ಸ್ -2 ಆಯ್ಕೆ ಮಾಡಿ ಶುಲ್ಕ ಪಾವತಿಸಿರುವವರು ಹಾಗೂ ಯಾವುದೇ ಸೀಟು ಹಂಚಿಕೆ ಆಗದೆ ಇರುವವರು ಮೂಲ ದಾಖಲೆಗಳನ್ನು ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಚಾಯ್ಸ್ -2 ಮತ್ತು 3 ಆಯ್ಕೆ ಮಾಡಿಕೊಂಡವರು ಡಿಸೆಂಬರ್ 6, 7, 9 ರಂದು ದಾಖಲೆ ಸಲ್ಲಿಸಬೇಕು. ಸೀಟು ಹಂಚಿಕೆಯಾಗದವರು ಡಿಸೆಂಬರ್ 10 ರಿಂದ 17ರ ವರೆಗೆ ದಾಖಲೆ ಸಲ್ಲಿಸಬೇಕು. ನಿಗದಿತ ದಿನಾಂಕಗಳಂದು ಮೂಲ ದಾಖಲೆ ಸಲ್ಲಿಸದಿದ್ದಲ್ಲಿ ಎರಡನೇ ಸುತ್ತಿನ ಸೀಟು ಹಂಚಿಕೆಗೆ ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಪಷ್ಟಪಡಿಸಿದೆ.