ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಯುಜಿ ನೀಟ್ -2021 ರಲ್ಲಿ ಅರ್ಹತೆ ಪಡೆದಿರುವ ಅರ್ಹ ಅಭ್ಯರ್ಥಿಗಳು 2021 ನೇ ಸಾಲಿನ ವೈದ್ಯಕೀಯ, ದಂತವೈದ್ಯಕೀಯ, ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.
ಡಿಸೆಂಬರ್ 13 ರಂದು ಮಧ್ಯಾಹ್ನ 2 ಗಂಟೆಯಿಂದ ಡಿ. 17 ರಂದು 11.59 ರವರೆಗೆ ಆನ್ ಲೈನ್ ಮೂಲಕ ನೋಂದಣಿ ಮಾಡಿಸಿಕೊಂಡು ಅರ್ಜಿಗಳಲ್ಲಿನ ಮಾಹಿತಿ ಭರ್ತಿ ಮಾಡಬಹುದಾಗಿದೆ. ಡಿಸೆಂಬರ್ 18 ನೋಂದಣಿ ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ವಿವರಗಳಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ www.kea.kar.nic.in ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.