ಬೆಂಗಳೂರು: ತುಮಕೂರು, ಶಿವಮೊಗ್ಗ, ಮಂಡ್ಯ, ಕಾರವಾರದಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆ ತೆರೆಯುವ ಚಿಂತನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬುಧವಾರ ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಗೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಬೆಂಗಳೂರಿಗೆ ರಾಜ್ಯದ ವಿವಿಧ ಕಡೆಯಿಂದ ಹೆಚ್ಚಿನ ಸಂಖ್ಯೆಯ ರೋಗಿಗಳು ಬರುತ್ತಾರೆ. ಇದರಿಂದಾಗಿ ಸಕಾಲದಲ್ಲಿ ಎಲ್ಲರಿಗೂ ಉತ್ತಮ ಚಿಕಿತ್ಸೆ ನೀಡಲು ಸಾಧ್ಯವಾಗುತ್ತಿಲ್ಲ ಎಂಬುದು ಗಮನಕ್ಕಿದೆ. ಈ ಸಮಸ್ಯೆಯನ್ನು ತಪ್ಪಿಸಲು ತುಮಕೂರು, ಶಿವಮೊಗ್ಗ, ಮಂಡ್ಯ, ಕಾರವಾರದಲ್ಲಿ ಕಿದ್ವಾಯಿ ಮಾದರಿ ಆಸ್ಪತ್ರೆಗಳನ್ನು ತೆರೆಯುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ಇದೇ ರೀತಿ ಇಂದಿರಾಗಾಂಧಿ ಮಕ್ಕಳ ಆಸ್ಪತ್ರೆಯನ್ನು ಕಲಬುರಗಿಯಲ್ಲಿ ಪ್ರಾರಂಭಿಸಲು ಚಿಂತನೆ ನಡೆಸಿದ್ದು, ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.