ಬೆಂಗಳೂರು: ಖಾಸಗಿ ಕಾಲೇಜುಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಶುಲ್ಕದಲ್ಲಿ ಹೆಚ್ಚಳ ಮಾಡುವ ಸಾಧ್ಯತೆ ಇದೆ.
ಸರ್ಕಾರಿ ಸೀಟು ಶುಲ್ಕ ಶೇಕಡ 15 ರಷ್ಟು, ಖಾಸಗಿ ಆಡಳಿತ ಮಂಡಳಿ ಸೀಟು ಶುಲ್ಕ ಶೇಕಡ 25 ರಷ್ಟು ಏರಿಕೆಯಾಗಬಹುದು ಎಂದು ಹೇಳಲಾಗಿದೆ.
ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ಖಾಸಗಿ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳಿಗೆ ಭಾರೀ ಶುಲ್ಕದ ಹೊರೆ ಬೀಳಲಿದೆ. ಖಾಸಗಿ ಕಾಲೇಜುಗಳಲ್ಲಿ ಸರ್ಕಾರಿ ಕೋಟಾದ ಸೀಟುಗಳು ಶುಲ್ಕವನ್ನು ಶೇಕಡ 15 ರಷ್ಟು ಮತ್ತು ಆಡಳಿತ ಮಂಡಳಿ ಸೀಟುಗಳಿಗೆ ಶೇಕಡ 25 ರಷ್ಟು ಹೆಚ್ಚಳ ಮಾಡುವ ಸಾಧ್ಯತೆ ಇದೆ. ಸರ್ಕಾರ ಖಾಸಗಿ ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜುಗಳ ನಡುವೆ ಈ ಕುರಿತಾದ ಒಪ್ಪಂದಕ್ಕೆ ಸಹಿ ಹಾಕಲಾಗಿದ್ದು, ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಪ್ರಕಟವಾಗುವ ಸಾಧಶ್ಯತೆ ಇದೆ. ಸರ್ಕಾರಿ ಕಾಲೇಜುಗಳಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸುಗಳಿಗೆ ಶುಲ್ಕ ಹೆಚ್ಚಳ ಮಾಡಿಲ್ಲ ಎಂದು ಹೇಳಲಾಗಿದೆ.