ಬೆಂಗಳೂರು: ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.
ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಶನಿವಾರ ಸಮಾರಂಭವೊಂದರಲ್ಲಿ ಮಾತನಾಡಿ, ದೇಶದಲ್ಲಿನ ವೈದ್ಯಕೀಯ ಸೀಟುಗಳ ಸಂಖ್ಯೆಯನ್ನು 40,000 ದಷ್ಟು ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಬಡವರ ಮಕ್ಕಳು ವೈದ್ಯಕೀಯ ಶಿಕ್ಷಣ ಪಡೆಯಲು ಅನುಕೂಲವಾಗಬೇಕೆನ್ನುವುದು ಸರ್ಕಾರದ ಆಶಯವಾಗಿದೆ. ಪ್ರಸ್ತುತ ದೇಶದಲ್ಲಿ 1.1 ಲಕ್ಷದಷ್ಟು ಇರುವ ವೈದ್ಯಕೀಯ ಸೀಟುಗಳನ್ನು 2029ರ ವೇಳೆಗೆ 1.50 ಲಕ್ಷಕ್ಕೆ ಹೆಚ್ಚಳ ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.