
ಶಿವಮೊಗ್ಗ: ಶಿವಮೊಗ್ಗದ ಸರ್ಕಾರಿ ಮೆಡಿಕಲ್ ಕಾಲೇಜ್ ಸಹ ಪ್ರಾಧ್ಯಾಪಕರೊಬ್ಬರ ವಿರುದ್ಧ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ.
ಜುಲೈ 15 ರಂದು ವೈದ್ಯಕೀಯ ವ್ಯಾಸಂಗ ಮತ್ತು ತರಬೇತಿ ಪೂರ್ಣಗೊಳಿಸಿದ ವಿದ್ಯಾರ್ಥಿನಿ, ನಿರಾಕ್ಷೇಪಣಾ ಪತ್ರ(NOC) ಪಡೆಯಲು ಹೋಗಿದ್ದ ಸಂದರ್ಭದಲ್ಲಿ ಸಹಪ್ರಾಧ್ಯಾಪಕ ಅಸಭ್ಯವಾಗಿ ವರ್ತಿಸಿದ್ದಾರೆ. ಮಾನಸಿಕ, ದೈಹಿಕ ಕಿರುಕುಳ ನೀಡಿದ್ದಾರೆ ಎಂದು ನೊಂದ ವಿದ್ಯಾರ್ಥಿನಿ ಕಾಲೇಜಿನ ದೂರು ವಿಭಾಗಕ್ಕೆ ಮಾಹಿತಿ ನೀಡಿದ್ದಾರೆ. ಈ ವಿಚಾರದ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಆಂತರಿಕ ತನಿಖೆಗೆ ಮುಂದಾಗಿದೆ ಎಂದು ಹೇಳಲಾಗಿದೆ.