ಜಮ್ಮು: ಹಾಸ್ಟೆಲ್‌ನಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರದ ಕುರಿತು ಎರಡು ಗುಂಪುಗಳ ನಡುವೆ ನಡೆದ ಮಾರಾಮಾರಿಯಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬನ ತಲೆಗೆ ಗಾಯವಾಗಿರುವ ಘಟನೆ ಜಮ್ಮುವಿನಲ್ಲಿ ನಡೆದಿದೆ.
ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ (ಜಿಎಂಸಿ) ಘಟನೆ ನಡೆದಿದೆ. ಪ್ರತಿಭಟನೆ ವೇಳೆ ಮತ್ತೊಂದು ಗುಂಪಿನ ವಿದ್ಯಾರ್ಥಿಗಳು ರಾಡ್‌ಗಳಿಂದ ಹೊಡೆದಿದ್ದಾರೆ ಎನ್ನಲಾಗಿದೆ. ವಿದ್ಯಾರ್ಥಿಯೊಬ್ಬ ಭಾನುವಾರ ಸಂಜೆ ವಾಟ್ಸಾಪ್ ಗ್ರೂಪ್‌ನಲ್ಲಿ ದಿ ಕೇರಳ ಸ್ಟೋರಿ ಚಿತ್ರ ವೀಕ್ಷಿಸಲು ಯೋಗ್ಯವಾಗಿದೆ ಎಂದು ತಿಳಿಸಿದ್ದಾನೆ. ಇದರಿಂದ ಗಲಾಟೆ ಶುರುವಾಗಿದೆ. ಗ್ರೂಪ್ ನಲ್ಲಿದ್ದ ಇತರೆ ವಿದ್ಯಾರ್ಥಿಗಳು ವಾಗ್ವಾದಕ್ಕೆ ಮುಂದಾದ್ರು. ಹೀಗಾಗಿ ಪ್ರತಿಭಟನೆ ನಡೆಸಲಾಯ್ತು.
ಪ್ರತಿಭಟನಾನಿರತ ವಿದ್ಯಾರ್ಥಿಗಳ ಪ್ರಕಾರ, ಲಿಂಕ್ ಹಂಚಿಕೆಗೆ ಆಕ್ಷೇಪಿಸಿದ ವ್ಯಕ್ತಿಯನ್ನು ನಂತರ ಹಾಸ್ಟೆಲ್‌ನೊಳಗೆ ಬಂದು ಹಲ್ಲೆ ಮಾಡಲಾಯಿತು. ಕೆಲವು ಹೊರಗಿನವರು ಸೇರಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಗಲಾಟೆಗೆ ಕಾರಣರಾದರು. ಬಲಪಂಥೀಯ ಗುಂಪಿನ ಸದಸ್ಯರನ್ನು ಹೊರಗಿನಿಂದ ಹಾಸ್ಟೆಲ್‌ಗೆ ಕರೆತಂದರು. ಅವರು ಧಾರ್ಮಿಕ ಘೋಷಣೆಗಳನ್ನು ಕೂಗಿದರು ಮತ್ತು ವಿದ್ಯಾರ್ಥಿಯೊಬ್ಬರ ಮೇಲೆ ರಾಡ್ ನಿಂದ ಹಲ್ಲೆ ನಡೆಸಿದ್ರು. ಇದರಿಂದ ವಿದ್ಯಾರ್ಥಿ ಗಾಯಗೊಂಡಿದ್ದಾನೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹಲ್ಲೆಯಲ್ಲಿ ಇನ್ನೂ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ಇನ್ನು ಈ ಸಂಬಂಧ ಪ್ರಕರಣ ದಾಖಲಿಸಿರುವ ಪೊಲೀಸರು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
https://twitter.com/Mohd_B_A/status/1658349432390180865?ref_src=twsrc%5Etfw%7Ctwcamp%5Etweetembed%7Ctwterm%5E1658349432390180865%7Ctwgr%5Ef462206a9dad1f8be18cec3e8681a7e9ce885308%7Ctwcon%5Es1_&ref_url=https%3A%2F%2Fwww.freepressjournal.in%2Feducation%2Fviral-video-kashmiri-student-being-thrashed-over-the-kerala-story-clash