
ಮೈಸೂರು: ನಾಲೆಯಲ್ಲಿ ಈಜಲು ಹೋದ ವೈದ್ಯಕೀಯ ವಿದ್ಯಾರ್ಥಿ ನೀರು ಪಾಲಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದಲ್ಲಿ ನಡೆದಿದೆ.
ಬೆಂಗಳೂರು ಮೂಲದ ಕಿಶನ್ (21) ಮೃತ ವಿದ್ಯಾರ್ಥಿ. ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನಲ್ಲಿ ಮೆಡಿಕಲ್ ಓದುತ್ತಿದ್ದ. ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ಆಗಮಿಸಿದ್ದ. ಈ ವೇಳೆ ಎಡದಂಡೆ ಕಾಲುವೆಗೆ ಈಜಲು ಹೋಗಿದ್ದಾನೆ.
ಕಿಶನ್ ಗೆ ಈಜಲು ಬರುತ್ತಿರಲಿಲ್ಲ ಎನ್ನಲಾಗಿದೆ. ಆದರೂ ನೀರಿಗಿಳಿದಿದ್ದ. ನಾಲೆಯಲ್ಲಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.