ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯ ವೇತನವನ್ನು ಶೇಕಡ 25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಶಿಷ್ಯ ವೇತನ ಹೆಚ್ಚಿಸುವಂತೆ ಆಗ್ರಹಿಸಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳು ಮುಷ್ಕರಕ್ಕೆ ಕರೆ ನೀಡಿದ್ದರು. ಪರಿಷ್ಕೃತ ಶಿಷ್ಯವೇತನ ಜಾರಿ ಮಾಡಲಾಗಿದ್ದು, ಮುಷ್ಕರ ಕೈಬಿಟ್ಟಿದ್ದಾರೆ ಎಂದು ಹೇಳಿದ್ದಾರೆ.
ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯವೇತನ ಶೇಕಡ 25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ.
ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿಗಳಿಗೆ ಮೊದಲನೇ ವರ್ಷ 56,250 ರೂ., ಎರಡನೇ ವರ್ಷ 62,500 ರೂ. ,ಮೂರನೇ ವರ್ಷ 68,750 ರೂ. ಶಿಷ್ಯವೇತನ ನೀಡಲಾಗುವುದು.
ಸೂಪರ್ ಸ್ಪೆಷಾಲಿಟಿ ವೈದ್ಯ ವಿದ್ಯಾರ್ಥಿಗಳಿಗೆ ಮೊದಲನೇ ವರ್ಷ 68,750 ರೂ., ಎರಡನೇ ವರ್ಷ 75,000 ರೂ. , ಮೂರನೇ ವರ್ಷ 81,250 ರೂ., ಹಿರಿಯ ರೆಸಿಡೆಂಟ್ ವೈದ್ಯಾಧಿಕಾರಿಗೆ 75,000 ರೂ. ಶಿಷ್ಯವೇತನ ನೀಡಲಾಗುವುದು ಎಂದು ಹೇಳಲಾಗಿದೆ.