ಬೆಂಗಳೂರು: ರಾಜ್ಯಾದ್ಯಂತ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದು, ಸರ್ಕಾರಿ ಆಸ್ಪತ್ರೆ, ಒಪಿಡಿ ಸೇವೆಯಲ್ಲಿ ಭಾರಿ ವ್ಯತ್ಯಯವಾಗಿವೆ.
ವಿದ್ಯಾರ್ಥಿ ವೇತನ ಪರಿಷ್ಕರಿಸುವಂತೆ ಆಗ್ರಹಿಸಿ ವೈದ್ಯಕೀಯ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಫ್ರೀಂಡಂ ಪಾರ್ಕ್ ನಲ್ಲಿ ವೈದ್ಯಕೀಯ ವಿದ್ಯಾರ್ಥಿಗಳು ಧರಣಿ ನಡೆಸುತ್ತಿದ್ದು, ಸ್ಟೈಫಂಡ್ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.
ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆಯಿಂದಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆ, ಕೆ.ಸಿ.ಜನರಲ್ ಆಸ್ಪತ್ರೆ ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಒಪಿಡಿ ಸೇವೆಯಲ್ಲಿ ವ್ಯತ್ಯಯವಾಗುತ್ತಿದ್ದು, ಒಳ ರೋಗಿಗಳಿಗೆ ಮಾತ್ರ ಚಿಕಿತ್ಸೆ, ತುರ್ತುಸೇವೆ ಲಭ್ಯವಿದೆ.