alex Certify ಸಿಎಂ ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಎಂ ಭೇಟಿಯಾದ ಸಂಸದೆ ಸುಮಲತಾ ಅಂಬರೀಶ್

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.

ರೇಸ್ ಕೋರ್ಸ್ ರಸ್ತೆಯ ಸರ್ಕಾರಿ ನಿವಾಸದಲ್ಲಿ ಸಿಎಂ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಭಾರಿ ಮಳೆಯಿಂದಾಗಿ ಅಪಾರ ಪ್ರಮಾಣದ ನಷ್ಟವಾಗಿದ್ದು, ಕೂಡಲೇ ವಿಶೇಷ ಅನುದಾನ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿದ್ದಾರೆ.

ಸಂತ್ರಸ್ತರಿಗೆ ಕಾಳಜಿ ಕೇಂದ್ರ ತೆರೆಯುವಂತೆ ಮನವಿ ಮಾಡಲಾಗಿದೆ. ಅಪಘಾತದಲ್ಲಿ ಬಂಡೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮುತ್ತಮ್ಮ ಮತ್ತು ಅವರ ಕುಟುಂಬದ ಐವರು ಸದಸ್ಯರು ಮೃತಪಟ್ಟಿದ್ದಾರೆ. ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆಯೂ ಮನವಿ ಮಾಡಲಾಗಿದೆ. ಮನವಿ ಸ್ವೀಕರಿಸಿದ ಸಿಎಂ ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆನ್ನಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...