
ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರ ಭೇಟಿಗೆ ಆಕ್ಷೇಪವಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ.
ಬೆಂಗಳೂರಿನ ಜೆಪಿ ನಗರದಲ್ಲಿರುವ ಸಂಸದೆ ಸುಮಲತಾ ಅಂಬರೀಶ್ ಅವರ ನಿವಾಸಕ್ಕೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ಸಮಾಲೋಚನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಇದು ಅಂಬರೀಶ್ ಅವರ ಮನೆ. ಯಾರೇ ಬಂದರೂ ಸ್ವಾಗತಿಸುತ್ತೇವೆ. ಹೆಚ್.ಡಿ.ಕೆ. ಜತೆ ಚರ್ಚಿಸಲು ಸಿದ್ಧ ಎಂದು ಹೇಳಿದ್ದಾರೆ.
ಬೆಂಬಲಿಗರು, ಮುಖಂಡರ ಅಭಿಪ್ರಾಯ ಕೇಳುತ್ತೇನೆ. ಮಂಡ್ಯದ ಬೆಂಬಲಿಗರೊಂದಿಗೆ ಚರ್ಚಿಸುತ್ತೇನೆ. ಮಂಡ್ಯದಲ್ಲೇ ನನ್ನ ನಿಲುವನ್ನು ಘೋಷಣೆ ಮಾಡುತ್ತೇನೆ. ಬಿಜೆಪಿ ಮಂಡ್ಯ ಕ್ಷೇತ್ರ ಉಳಿಸಿಕೊಂಡಿದ್ದರೆ ನಾವು ಉತ್ತಮ ಫಲಿತಾಂಶ ಪಡೆಯುವ ನಿರೀಕ್ಷೆಯಿತ್ತು. ಚುನಾವಣೆಗೆ ಬೆಂಬಲ ನೀಡಬೇಕೆಂದು ವಿಜಯೇಂದ್ರ ಕೇಳಿದ್ದಾರೆ. ಮಂಡ್ಯದಲ್ಲೇ ನನ್ನ ನಿಲುವು ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದಾರೆ.