ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ.
ಮಾಜಿ ಸಚಿವ, ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅವರು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಲ್.ಆರ್. ಶಿವರಾಮೇಗೌಡ, ನಾನು ಆಪರೇಷನ್ ಹಸ್ತದಿಂದ ದೂರ ಇದ್ದೇನೆ. ಡಿ.ಕೆ. ಶಿವಕುಮಾರ್ ನನ್ನ ಸಂಬಂಧಿಕರಾಗಿದ್ದು, ಸಹಜವಾಗಿ ಭೇಟಿಯಾಗಿದ್ದೆ. ನಮ್ಮ ಭೇಟಿ ವೇಳೆ ರಾಜಕೀಯ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.