ಬೆಂಗಳೂರು: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೀವಾಲಾ ನೇತೃತ್ವದಲ್ಲಿ ಸಚಿವರು, ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದು ವಿವಾದಕ್ಕೆ ಕಾರಣವಾಗಿದೆ.
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್, ಕೆ.ಜೆ. ಜಾರ್ಜ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಆಡಳಿತಾಧಿಕಾರಿ ರಾಕೇಶ್ ಸಿಂಗ್ ಮೊದಲಾದವರು ಸಭೆಯಲ್ಲಿ ಭಾಗವಹಿಸಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿವೆ.
ಸುರ್ಜೇವಾಲಾ ನೇತೃತ್ವದಲ್ಲಿ ಅಧಿಕಾರಿಗಳ ಸಭೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು ನೀಡಲಾಗುವುದು. ಮಾಜಿ ಡಿಸಿಎಂ ಆರ್. ಅಶೋಕ್ ನೇತೃತ್ವದಲ್ಲಿ ಬೆಂಗಳೂರು ಬಿಜೆಪಿ ಶಾಸಕರ ನಿಯೋಗ ಮಧ್ಯಾಹ್ನ 12:30ಕ್ಕೆ ರಾಜಭವನಕ್ಕೆ ತೆರಳಿ ದೂರು ನೀಡಲಿದೆ.