ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆ ಅಂತ್ಯವಾಗಿದೆ.
ಸಭೆಯಲ್ಲಿ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು, ತಜ್ಞರು ಅಧಿಕಾರಿಗಳು ಹಾಗೂ ಹಿರಿಯ ಸಚಿವರು ಭಾಗಿಯಾಗಿದ್ದ ಸಭೆಯಲ್ಲಿ ಕೋರೋನಾ ತಡೆಗಟ್ಟುವ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಸಲಾಗಿದೆ.
ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಭೆಯ ನಂತರ ಮಾಹಿತಿ ನೀಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು, ರಾಜ್ಯಾದ್ಯಂತ ಡಿಸೆಂಬರ್ 28 ರಿಂದ 10 ದಿನಗಳವರೆಗೆ ರಾತ್ರಿ 10 ರಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಮಾಡಲಾಗುವುದು.
ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬಹಿರಂಗ ಹೊಸ ವರ್ಷಾಚರಣೆ ನಿಷೇಧಿಸಲಾಗಿದೆ.
ಹೋಟೆಲ್ ಗಳಲ್ಲಿ ಶೇಕಡ 50 ರಷ್ಟು ಜನರಿಗೆ ಮಾತ್ರ ಪ್ರವೇಶ ನೀಡಲಾಗಿದೆ
ಶೇ. 97 ಜನರಿಗೆ ಮೊದಲ ಡೋಸ್ ನೀಡಿದ್ದು, ಬಾಕಿ ಶೇ. 3 ರಷ್ಟು ಶೀಘ್ರದಲ್ಲಿ ನೀಡಲು ಸಮರೋಪಾದಿ ಕೆಲಸ ಮಾಡಲಾಗುವುದು.