ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ವೀಕೆಂಡ್ ಕರ್ಫ್ಯೂ ರದ್ದು ಮಾಡಲು ತೀರ್ಮಾನಿಸಲಾಗಿದೆ.
ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಥಿಯೇಟರ್, ಪಬ್, ಬಾರ್, ಹೋಟೆಲ್ ಗಳಲ್ಲಿ ಶೇಕಡ 50 ರ ಪ್ರವೇಶ ಮಿತಿ ಇರಲಿದೆ.
ರಾಜ್ಯದಲ್ಲಿ ರ್ಯಾಲಿ, ಪ್ರತಿಭಟನೆಗಳಿಗೆ ನಿಷೇಧವಿದೆ. ಪೂಜಾ ಮಂದಿರಗಳಲ್ಲಿ ವಿಶೇಷ ಸೇವೆಗಳು ಇರುವುದಿಲ್ಲ. ಜಾತ್ರೆ, ಉತ್ಸವಗಳಲ್ಲಿ ಜನ ಸೇರುವಂತಿಲ್ಲ. ಎಲ್ಲ ಸಾರ್ವಜನಿಕ ಸ್ಥಳಗಳಲ್ಲಿ ಶೇಕಡ 50ರ ಮಿತಿ ಹೇರಲಾಗಿದೆ.
ಮದುವೆ ಸಮಾರಂಭಗಳಿಗೆ 200 ಜನರಿಗೆ ಮಾತ್ರ ಅವಕಾಶ ಇರುತ್ತದೆ.
ನೈಟ್ ಕರ್ಫ್ಯೂ ಸಂದರ್ಭದಲ್ಲಿ ರೋಗಿಗಳು ಮತ್ತು ಅವರ ಸಹಾಯಕರ ಸಂಚಾರಕ್ಕೆ ನಿರ್ಬಂಧ ಇರುವುದಿಲ್ಲ.
ಕಂಪನಿ, ಕಚೇರಿ, ಕೈಗಾರಿಕೆಗಳ ಉದ್ಯೋಗಿಗಳು ತಮ್ಮ ಗುರುತಿನ ಚೀಟಿ ತೋರಿಸಿ ಸಂಚರಿಸಬಹುದು.
ಹೋಂ ಡೆಲಿವರಿ, ಇ-ಕಾಮರ್ಸ್, ಫುಡ್ ಡೆಲಿವರಿ, ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಒಪ್ಪಿಗೆ ನೀಡಿದೆ. ಮೆಟ್ರೋ, ಬಿಎಂಟಿಸಿ, ಕೆಎಸ್ಆರ್ಟಿಸಿ ಬಸ್ ಸಂಚಾರ ಇರಲಿದೆ.
ಪ್ರತಿದಿನ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಮುಂದುವರೆಯಲಿದ್ದು, ಜನವರಿ 31 ರವರೆಗೆ ಚಾಲ್ತಿಯಲ್ಲಿರುವ ಎಲ್ಲಾ ನಿರ್ಬಂಧಗಳು ಇರುತ್ತವೆ.