ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇಂದು ಹಿರಿಯ ಸಚಿವರ ಸಭೆ ನಡೆಯಲಿದೆ. ಸಭೆಯಲ್ಲಿ ಲಾಕ್ ಡೌನ್ ವಿಸ್ತರಣೆ, ವಿಶೇಷ ಪ್ಯಾಕೇಜ್ ನೀಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.
ಕೊರೋನಾ ಸೋಂಕಿಗೆ ಕಡಿವಾಣ ಹಾಕಲು ಮತ್ತಷ್ಟು ದಿನ ಲಾಕ್ ಡೌನ್ ಮುಂದುವರೆಸುವ ಮತ್ತು ದುಡಿಯುವ ವರ್ಗಕ್ಕೆ ಆರ್ಥಿಕ, ನೆರವು ನೀಡುವ ಬಗ್ಗೆ ತೀರ್ಮಾನ ಕೈಗೊಂಡು ಸಭೆ ಮುಗಿದ ನಂತರ ಸಿಎಂ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಲಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯಲಿರುವ ಸಭೆಗೆ ಮೂವರು ಡಿಸಿಎಂಗಳು ಹಾಗೂ ಹಿರಿಯ ಸಚಿವರಿಗೆ ಆಹ್ವಾನ ನೀಡಲಾಗಿದೆ. ಗೋವಿಂದ ಕಾರಜೋಳ ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಕೆ.ಎಸ್. ಈಶ್ವರಪ್ಪ, ಜಗದೀಶ್ ಶೆಟ್ಟರ್, ಸುರೇಶ್ ಕುಮಾರ್, ವಿ. ಸೋಮಣ್ಣ, ಬಸವರಾಜ್ ಬೊಮ್ಮಾಯಿ ಮೊದಲಾದವರು ಭಾಗವಹಿಸಲಿದ್ದಾರೆ.