ನವದೆಹಲಿ: ನಾಳೆ ದೆಹಲಿಯಲ್ಲಿ ಕೊರೋನಾ ಲಸಿಕೆ ಅಭಿಯಾನದ ಬಗ್ಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆಯನ್ನು ಕೇಂದ್ರ ಸರ್ಕಾರ ಕರೆದಿದೆ.
ಕೇಂದ್ರ ಆರೋಗ್ಯ ಸಚಿವರಾದ ಮನ್ ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಯಲಿದೆ
ದೇಶದಲ್ಲಿ 11 ಕೋಟಿ ಜನರು ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿಲ್ಲ. 84 ದಿನಗಳು ಪೂರ್ಣಗೊಂಡಿದ್ದರೂ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿಲ್ಲ. ಇನ್ನೂ ಕೋಟ್ಯಂತರ ಜನರು ಮೊದಲ ಲಸಿಕೆಯನ್ನು ಕೂಡ ಪಡೆದುಕೊಂಡಿಲ್ಲ.
ಹೀಗಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಸಭೆ ನಡೆಸಲಾಗುವುದು. ಲಸಿಕೆ ಪಡೆಯುವಂತೆ ಜನರನ್ನು ಉತ್ತೇಜಿಸುವ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಲಸಿಕೆ ಆಂದೋಲನಕ್ಕೆ ಪ್ರೋತ್ಸಾಹ ನೀಡುವ ಸಂಬಂಧ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಲಾಗುತ್ತದೆ.