alex Certify BIG NEWS: ಫಸ್ಟ್ ಡೋಸ್ ಪಡೆದು 84 ದಿನವಾದ್ರೂ 2 ನೇ ಡೋಸ್ ಲಸಿಕೆ ಪಡೆದಿಲ್ಲ 11 ಕೋಟಿ ಜನ, ಕೇಂದ್ರದಿಂದ ನಾಳೆ ಮಹತ್ವದ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಫಸ್ಟ್ ಡೋಸ್ ಪಡೆದು 84 ದಿನವಾದ್ರೂ 2 ನೇ ಡೋಸ್ ಲಸಿಕೆ ಪಡೆದಿಲ್ಲ 11 ಕೋಟಿ ಜನ, ಕೇಂದ್ರದಿಂದ ನಾಳೆ ಮಹತ್ವದ ಸಭೆ

ನವದೆಹಲಿ: ನಾಳೆ ದೆಹಲಿಯಲ್ಲಿ ಕೊರೋನಾ ಲಸಿಕೆ ಅಭಿಯಾನದ ಬಗ್ಗೆ ಮಹತ್ವದ ಸಭೆ ನಡೆಸಲಾಗುತ್ತದೆ. ಎಲ್ಲಾ ರಾಜ್ಯಗಳ ಆರೋಗ್ಯ ಸಚಿವರ ಸಭೆಯನ್ನು ಕೇಂದ್ರ ಸರ್ಕಾರ ಕರೆದಿದೆ.

ಕೇಂದ್ರ ಆರೋಗ್ಯ ಸಚಿವರಾದ ಮನ್ ಸುಖ್ ಮಾಂಡವಿಯಾ ಅಧ್ಯಕ್ಷತೆಯಲ್ಲಿ ದೆಹಲಿಯ ವಿಜ್ಞಾನ ಭವನದಲ್ಲಿ ಸಭೆ ನಡೆಯಲಿದೆ

ದೇಶದಲ್ಲಿ 11 ಕೋಟಿ ಜನರು ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿಲ್ಲ. 84 ದಿನಗಳು ಪೂರ್ಣಗೊಂಡಿದ್ದರೂ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿಲ್ಲ. ಇನ್ನೂ ಕೋಟ್ಯಂತರ ಜನರು ಮೊದಲ ಲಸಿಕೆಯನ್ನು ಕೂಡ ಪಡೆದುಕೊಂಡಿಲ್ಲ.

ಹೀಗಾಗಿ ಕೇಂದ್ರ ಸರ್ಕಾರದಿಂದ ಮಹತ್ವದ ಸಭೆ ನಡೆಸಲಾಗುವುದು. ಲಸಿಕೆ ಪಡೆಯುವಂತೆ ಜನರನ್ನು ಉತ್ತೇಜಿಸುವ ಕುರಿತಾಗಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ. ಲಸಿಕೆ ಆಂದೋಲನಕ್ಕೆ ಪ್ರೋತ್ಸಾಹ ನೀಡುವ ಸಂಬಂಧ ಆರೋಗ್ಯ ಸಚಿವರೊಂದಿಗೆ ಸಭೆ ನಡೆಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...