
ನವದೆಹಲಿ: ರೈತರು ಮತ್ತು ಕೇಂದ್ರ ಸರ್ಕಾರದೊಂದಿಗೆ ನಡೆದ 7 ನೇ ಸುತ್ತಿನ ಸಂಧಾನ ಸಭೆ ಕೂಡ ವಿಫಲವಾಗಿದೆ.
ಜನವರಿ 4 ರಂದು ಮತ್ತೆ ಸಂಧಾನ ಸಭೆ ನಡೆಸಲು ತೀರ್ಮಾನಿಸಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಹೋರಾಟ ಕೈಗೊಂಡಿರುವ ರೈತ ನಾಯಕರ ಜೊತೆಗೆ ಕೇಂದ್ರ ಸರ್ಕಾರದ ಸಭೆ ಇಂದು ದೆಹಲಿ ವಿಜ್ಞಾನ ಭವನದಲ್ಲಿ ನಡೆದಿದ್ದು, ರೈತರ ಬೇಡಿಕೆಗಳಿಗೆ ಕೇಂದ್ರ ಒಪ್ಪದ ಹಿನ್ನೆಲೆಯಲ್ಲಿ ಮತ್ತೆ ಸಭೆ ವಿಫಲಗೊಂಡಿದೆ.
ರೈತರ 4 ಬೇಡಿಕೆಗಳಲ್ಲಿ ಎರಡು ಬೇಡಿಕೆಗಳನ್ನು ಮಾತ್ರ ಈಡೇರಿಸಲು ಕೇಂದ್ರ ಸರ್ಕಾರ ಒಪ್ಪಿದೆ. ಆದರೆ, ಇದಕ್ಕೆ ರೈತ ಮುಖಂಡರು ಒಪ್ಪಿಗೆ ಸೂಚಿಸಿಲ್ಲ. ಈ ಕಾರಣದಿಂದಾಗಿ ಮತ್ತೊಮ್ಮೆ ಸಂಧಾನ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ.