ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಯ ಕೊಂದುಕೊರತೆ ಕುರಿತಾಗಿ ಚರ್ಚೆ ನಡೆಸಲು ಪ್ರತಿ ತಿಂಗಳ ಮೂರನೇ ಶನಿವಾರ ಬೆಂಗಳೂರಿನಲ್ಲಿರುವ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಸಭೆ ನಡೆಸಲಾಗುವುದು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಗ್ರಾಮ ಪಂಚಾಯಿತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ನೀಡಿದ್ದ ಭರವಸೆಯಂತೆ ಪ್ರತಿ ತಿಂಗಳ ಮೂರನೇ ಶನಿವಾರ ಕೊಂದು ಕೊರತೆ ಸಭೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಪ್ರತಿ ತಿಂಗಳ ಮೂರನೇ ಶನಿವಾರ ಮಧ್ಯಾಹ್ನ 3 ಗಂಟೆಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಕುಂದು ಕೊರತೆ ಸಭೆ ಆಯೋಜಿಸಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಡಾ. ಅರುಂಧತಿ ಚಂದ್ರಶೇಖರ್ ಹೇಳಿದ್ದಾರೆ.