
ಇದು ಈಗ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಮೆಹಬೂಬಾ ಮುಫ್ತಿ ಅವರದ್ದು ರಾಜಕೀಯ ಗಿಮಿಕ್ ಎಂದು ಹೇಳಿದ್ದರೆ, ಮುಸ್ಲಿಂ ಧಾರ್ಮಿಕ ಮುಖಂಡರು ಇದು ಇಸ್ಲಾಂ ವಿರೋಧಿ ನಡೆ ಎಂದು ಕಿಡಿ ಕಾರಿದ್ದಾರೆ.
ಈ ಹೇಳಿಕೆಗಳಿಗೆ ಪ್ರತಿಕ್ರಿಯಿಸಿರುವ ಮೆಹಬೂಬಾ ಮುಫ್ತಿ, ಜಾತ್ಯಾತೀತ ರಾಷ್ಟ್ರವಾಗಿರುವ ಭಾರತದಲ್ಲಿ ನಾನು ವೈಯಕ್ತಿಕವಾಗಿ ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ನನ್ನ ಧರ್ಮ ಯಾವುದು ? ಅದನ್ನು ಹೇಗೆ ಪಾಲಿಸಬೇಕು ಎಂಬುದು ನನಗೆ ಗೊತ್ತಿದೆ. ನಾನು ಎಲ್ಲಿಗೆ ಹೋಗಬೇಕು ಎಂಬುದು ನನ್ನ ಸ್ವತಂತ್ರ ಆಯ್ಕೆ ಎಂದು ತಿರುಗೇಟು ನೀಡಿದ್ದಾರೆ.