alex Certify ‘ಮೇಕೆದಾಟು’ ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ ‘ಕಾನೂನು ಬಾಹಿರ’: ಸಿಎಂ ಆಕ್ರೋಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಮೇಕೆದಾಟು’ ಯೋಜನೆ ವಿರುದ್ಧ ತಮಿಳುನಾಡು ನಿರ್ಣಯ ‘ಕಾನೂನು ಬಾಹಿರ’: ಸಿಎಂ ಆಕ್ರೋಶ

ಬೆಂಗಳೂರು: ತಮಿಳುನಾಡು ವಿಧಾನಸಭೆಯಲ್ಲಿ ಮೇಕೆದಾಟು ಯೋಜನೆ ವಿರುದ್ಧ ಕೈಗೊಳ್ಳಲಾಗಿರುವ ನಿರ್ಣಯ ಕಾನೂನು ಬಾಹಿರವಾಗಿದೆ. ಒಂದು ರಾಜ್ಯ ಇನ್ನೊಂದು ರಾಜ್ಯದ ಹಕ್ಕನ್ನು ಆಕ್ರಮಿಸಿಕೊಳ್ಳುವಂತಹ ಜನ ವಿರೋಧಿ ನಿರ್ಣಯವಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ತಮಿಳುನಾಡಿಗೆ ನಂಬಿಕೆ ಇಲ್ಲದ ನಿರ್ಣಯ ಇದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ನಿರ್ಣಯವನ್ನು ಸಮಸ್ತ ಕರ್ನಾಟಕದ ಜನತೆ ಹಾಗೂ ಸರ್ಕಾರ ತೀವ್ರವಾಗಿ ಖಂಡಿಸುತ್ತದೆ. ಮೇಕೆದಾಟು ಯೋಜನೆ ಜಾರಿಗೆ ನಮ್ಮ ನಿರ್ಧಾರ ಅಚಲವಾಗಿದೆ. ಮೇಕೆದಾಟು ಯೋಜನೆ ರಾಜ್ಯದಲ್ಲಿ ಹುಟ್ಟುವ ಕಾವೇರಿ ನದಿಗೆ ಸಂಬಂಧಿಸಿದ್ದಾಗಿದೆ ಎಂದಿದ್ದಾರೆ.

ಕಾವೇರಿ ನ್ಯಾಯಾಧೀಕರಣ ಅನ್ವಯ ತಮಿಳುನಾಡಿಗೆ 177.25 ಟಿಎಂಸಿ ನೀರನ್ನು ಕೊಟ್ಟ ನಂತರ ಉಳಿದ ನೀರಿನ ಮೇಲೆ ಕರ್ನಾಟಕದ ಹಕ್ಕು ಇದೆ. ತಮಿಳುನಾಡಿನ ಈ ರಾಜಕೀಯ ನಿರ್ಧಾರವನ್ನು ಲೆಕ್ಕಿಸದೆ ಮೇಕೆದಾಟು ಯೋಜನೆಯನ್ನು ಕೈಗೆತ್ತಿಕೊಳ್ಳಲು ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...