ಚೆನ್ನೈ: ಲೋಕಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ ಜಯಗಳಿಸಿದ್ದಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ನಿರ್ಮಿಸಲು ಉದ್ದೇಶಿಸಿದ ಮೇಕೆದಾಟು ಅಣೆಕಟ್ಟೆ ನಿರ್ಮಾಣಕ್ಕೆ ತಡೆ ನೀಡುವುದಾಗಿ ಡಿಎಂಕೆ ಘೋಷಣೆ ಮಾಡಿದೆ.
‘ಇಂಡಿಯಾ’ ಮೈತ್ರಿಕೂಟದಲ್ಲಿ ಕಾಂಗ್ರೆಸ್ ಪ್ರಧಾನ ಪಕ್ಷವಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿದೆ. ಮೇಕೆದಾಟು ಅಣೆಕಟ್ಟು ನಿರ್ಮಿಸುವುದಾಗಿ ಭರವಸೆ ನೀಡಿದೆ. ಆದರೆ, ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟದ ಮೈತ್ರಿ ಪಕ್ಷ ಡಿಎಂಕೆ ಘೋಷಿಸಿದ ಪ್ರಣಾಳಿಕೆಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಬಿಡುವುದಿಲ್ಲ ಎಂದು ಘೋಷಣೆ ಮಾಡಿದೆ. ಲೋಕಸಭೆ ಚುನಾವಣೆ ಹೊತ್ತಲ್ಲೇ ಡಿಎಂಕೆ ಮೇಕೆದಾಟು ಬಗ್ಗೆ ಘೋಷಣೆ ಮಾಡಿರುವುದು ರಾಜ್ಯ ಕಾಂಗ್ರೆಸ್ ಗೆ ಮುಜುಗರ ತಂದು ವಿವಾದದ ಬಿರುಗಾಳಿ ಎಬ್ಬಿಸುವ ಸಾಧ್ಯತೆ ಇದೆ.