ಹಾಸನ: ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಮೇಕೆದಾಟು ಯೋಜನೆ ಪಾದಯಾತ್ರೆಗೆ ಬಿಜೆಪಿ ಮುಖಂಡ ಮಾಜಿ ಸಚಿವ ಎ. ಮಂಜು ಬೆಂಬಲಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪಾದಯಾತ್ರೆ ಉತ್ತಮ ಕೆಲಸವಾಗಿದೆ. ನಾನು ಅದನ್ನು ಬೆಂಬಲಿಸುತ್ತೇನೆ. ಒಂದು ದಿನ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುತ್ತೇನೆ. ನಮ್ಮ ಬೆಂಬಲಿಗರು ಕೂಡ ಕೊರೊನಾ ಮಾರ್ಗಸೂಚಿ ಪಾಲಿಸುವುದರೊಂದಿ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ಅವರಿಗೆ ಸಹಕಾರ ನೀಡುತ್ತೇನೆ ಎಂದು ಹೇಳಿದ್ದಾರೆ.
ಪಕ್ಷತೀತವಾಗಿ ಮೇಕೆದಾಟು ಪಾದಯಾತ್ರೆ ನಡೆಯುತ್ತಿದ್ದು, ಇದಕ್ಕೆ ಆಹ್ವಾನಿಸಿದ್ದಾರೆ. ಪಕ್ಷಾತೀತ ಪಾದಯಾತ್ರೆಯ ಉದ್ದೇಶವನ್ನು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.
ವಿಧಾನಪರಿಷತ್ ಚುನಾವಣೆಯಲ್ಲಿ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ಕೊಡಿಸಿದ್ದ ಎ. ಮಂಜು ಇತ್ತೀಚೆಗೆ ಬಿಜೆಪಿಯಲ್ಲಿ ಅತಂತ್ರರಾಗಿದ್ದು, ಅವರು ಇತ್ತೀಚೆಗೆ ಕಾಂಗ್ರೆಸ್ ನಾಯಕ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿದ್ದರು.