ರಾಮನಗರ: 4 ದಿನಗಳಿಂದ ದಂಡಯಾತ್ರೆ ಕೈಗೊಂಡಿರುವ ಡಿಕೆಶಿ ಮತ್ತು ಪಟಾಲಂ ಕೂಡಲೇ ಬಂಧಿಸಬೇಕು ಎಂದು ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.
ಡಿಕೆ ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಪಾದಯಾತ್ರೆ ವಿರುದ್ಧ ಸರ್ಕಾರ ಕ್ರಮ ಜರುಗಿಸಲಿದೆ. ಕೊರೋನಾ ಹೊತ್ತಲ್ಲಿ ಜನರನ್ನು ಸೇರಿಸಿಕೊಂಡು ಸೋಂಕು ಹರಡುತ್ತಿದ್ದಾರೆ. ಇದು ಡಿ.ಕೆ. ಶಿವಕುಮಾರ್ ಅವರ ಡ್ರಾಮಾ ಆಗಿದೆ ಎಂದು ಟೀಕಿಸಿದ್ದಾರೆ.
ಸಿದ್ದರಾಮಯ್ಯ ವಿರುದ್ಧ ರಾಜಕೀಯ ಮೇಲುಗೈ ಸಾಧಿಸಲು ಅವರು ಹುನ್ನಾರ ನಡೆಸಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಸೋಂಕಿನ ತೀವ್ರತೆ ಅರ್ಥವಾಗುತ್ತಿಲ್ಲ. ಮೇಕೆದಾಟು ವಿಚಾರದಲ್ಲಿ ಡಿ.ಕೆ. ಶಿವಕುಮಾರ್ ನಾಟಕವಾಡುತ್ತಿದ್ದಾರೆ. ಮೈಸೂರು ಭಾಗದಲ್ಲಿ ಪ್ರಭಾವ ಹೆಚ್ಚಿಸಿಕೊಳ್ಳಲು ಪಾದಯಾತ್ರೆ ಕೈಗೊಂಡಿದ್ದಾರೆ. ವಿವಿಧ ಕಡೆಗಳಿಂದ ಕಾರ್ಯಕರ್ತರನ್ನು ಕರೆತಂದು ಕೊರೋನಾ ಹರಡಿಸಲು ಕಾಂಗ್ರೆಸ್ ಪ್ರಯತ್ನ ನಡೆಸಿದೆ ಎಂದು ದೂರಿದ್ದಾರೆ.
ಕೂಡಲೇ ಡಿ.ಕೆ. ಶಿವಕುಮಾರ್ ಪಟಾಲಂ ಬಂಧಿಸಬೇಕು ಎಂದು ಯೋಗೇಶ್ವರ್, ಡಿಕೆಶಿ ಪಾದಯಾತ್ರೆಯಲ್ಲಿ ಪ್ರಾಮಾಣಿಕ ಕಾಳಜಿ ಇಲ್ಲ. ರಾಜಕೀಯ ದುರುದ್ದೇಶದಿಂದ ಪಾದಯಾತ್ರೆ ಕೈಗೊಳ್ಳಲಾಗಿದೆ. ಮೇಕೆದಾಟು ವಿಚಾರ ಕೋರ್ಟ್ ನಲ್ಲಿ ಕ್ಲಿಯರ್ ಆದ ಬಳಿಕ ಯೋಜನೆ ಕೈಗೆತ್ತಿಕೊಳ್ಳಬಹುದಾಗಿದೆ ಎಂದರು.