alex Certify ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಮೊದಲ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಮೊದಲ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ ಇನ್ನಿಲ್ಲ

ಮಂಡ್ಯ: ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಪ್ರಥಮ ಸ್ಥಾನಿಕ ಕರಗಂ ನಾರಾಯಣ ಅಯ್ಯಂಗಾರ್ ವಿಧಿವಶರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಮೊದಲ ಸ್ಥಾನಿಕರಾಗಿದ್ದ ಕರಗಂ ನಾರಾಯಣ ಅಯ್ಯಂಗಾರ್ ನಿಧನ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ಮುಗಿಯುವವರೆಗೂ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದೇವಾಲಯದ ಬಾಗಿಲು ಮುಚ್ಚಲಿದೆ ಎಂದು ತಿಳಿದುಬಂದಿದೆ.

ನಾರಾಯಣ ಅಯ್ಯಂಗಾರ್ ಭಾನುವಾರ ನಿಧನರಾಗಿದ್ದು, ಇಂದು ಮಧ್ಯಾಹ್ನ 12 ಗಂಟೆ ಬಳಿಕ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.

ಕರಗಂ ನಾರಾಯಣ ಅವರು ಮೊದಲು ಮುಖ್ಯಶಿಕ್ಷಕರಾಗಿದ್ದರು. ನಿವೃತ್ತಿ ಬಳಿಕ ದೇವಸ್ಥಾನದ ಪ್ರಥಮ ಸ್ಥಾನಿಕರಾಗಿದ್ದರು. ನಿವೃತ್ತಿ ಬಳಿಕ ಚೆಲುವನಾರಾಯಣಸ್ವಾಮಿಯ ಸೇವೆಗಾಗಿಯೇ ಜೀವನವನ್ನು ಮುಡುಪಾಗಿಟ್ಟಿದ್ದರು. ಕರಗಂ ನಾರಾಯಣ ಅವರಿಗೆ ರಾಜ್ಯ ಸರ್ಕಾರದಿಂದ ಹಲವಾರು ಪ್ರಶಸ್ತಿಗಳು ಬಂದಿವೆ.

ದೇವಾಲಯದ ಸಾಂಪ್ರದಾಯಿಕ ಮರ್ಯಾದೆಯಂತೆ ಕರಗಂ ನಾರಾಯಣ ಅಯ್ಯಂಗಾರ್ ಅವರ ಅಂತ್ಯಕ್ರಿಯೆ ನೆರವೇರಲಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...