
ಮಾರ್ಚ್ 14 ರಂದು ಮೇಲುಕೋಟೆಯಲ್ಲಿ ನಡೆಯುವ ವೈರಮುಡಿ ಬ್ರಹೋತ್ಸವಕ್ಕೆ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂಡ್ಯ ವಿಭಾಗದಿಂದ ಉಚಿತ ಬಸ್ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು, ಮೈಸೂರು, ಮಂಡ್ಯ, ನಾಗಮಂಗಲ, ಶ್ರೀರಂಗಪಟ್ಟಣ, ಮದ್ದೂರು ಮಳವಳ್ಳಿ ಪಾಂಡವಪುರ, ಕೆ.ಆರ್.ಪೇಟೆ ಬಸ್ ನಿಲ್ದಾಣಗಳಿಂದ ಮೇಲುಕೋಟೆಗೆ ಒಟ್ಟು 100 ವಿಶೇಷ ಕರ್ನಾಟಕ ಸಾರಿಗೆ ವಾಹನವನ್ನು ಹಾಗೂ ಬೆಂಗಳೂರು ಮತ್ತು ಮೈಸೂರಿನಿಂದ ಮೇಲುಕೋಟೆಗೆ ವೋಲ್ವೊ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದೆ. ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳುವಂತೆ ಕ.ರಾ.ರ.ಸಾ.ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ತಿಳಿಸಿರುತ್ತಾರೆ.