alex Certify ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಫೈರಿಂಗ್..! ಬೆಚ್ಚಿ ಬಿದ್ದ ನಿವಾಸಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ಫೈರಿಂಗ್..! ಬೆಚ್ಚಿ ಬಿದ್ದ ನಿವಾಸಿಗಳು

ಗ್ರೇಟರ್ ನೋಯ್ಡಾ: ಯುವಕರ ಗುಂಪೊಂದು ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಳಿಯಲ್ಲಿ ಬಂದೂಕಿನಿಂದ ಗುಂಡು ಹಾರಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಗ್ರೇಟರ್ ನೋಯ್ಡಾದ ಪ್ಯಾರಾಮೌಂಟ್ ಸೊಸೈಟಿಯಲ್ಲಿ ಈ ಘಟನೆ ನಡೆದಿದೆ.

ವಿಡಿಯೋದಲ್ಲಿ,  ಕೆಲವು ಯುವಕರು ಉದ್ಯಾನವನದಲ್ಲಿ ಹುಟ್ಟುಹಬ್ಬ ಆಚರಿಸುತ್ತಿರುವುದನ್ನು ನೋಡಬಹುದು. ಕಾರಿನ ಬಾನೆಟ್‌ನಲ್ಲಿ ಹಲವಾರು ಕೇಕ್‌ಗಳನ್ನು ಇಡಲಾಗಿದೆ. ಈ ವೇಳೆ ಬಂದೂಕು ಹಿಡಿದಿರುವ ವ್ಯಕ್ತಿಯೊಬ್ಬ ಗಾಳಿಯಲ್ಲಿ ಒಂದು ಗುಂಡು ಹಾರಿಸಿದ್ದು, ಇತರರು ಕೂಗು, ಹರ್ಷೋದ್ಗಾರಗಳನ್ನು ಮಾಡುತ್ತಾ ಹುಟ್ಟುಹಬ್ಬ ಆಚರಿಸಿದ್ದಾರೆ.

ತಡರಾತ್ರಿ ಭಾರಿ ಗುಂಡಿನ ಸದ್ದು ಕೇಳಿ, ಸಮೀಪದ ನಿವಾಸಿಗಳು ಬೆಚ್ಚಿ ಬಿದ್ದಿದ್ದಾರೆ. ಗುಂಡಿನ ಸದ್ದು ಕೇಳಿದ ಜನರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ,  ಪೊಲೀಸರು ಸ್ಥಳಕ್ಕೆ ಆಗಮಿಸುವಷ್ಟರಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ವೈರಲ್ ಆಗಿರುವ ವಿಡಿಯೋವನ್ನು ನೋಡಿದ ಪೊಲೀಸರು, ಸದ್ಯ ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಯುವಕರಿಗೆ ಸಹಾಯ ಮಾಡಿದ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದ್ದು, ಆತನ ಬಳಿಯಿದ್ದ ಪರವಾನಗಿ ಪಡೆದ ಗನ್ ಮತ್ತು ಕಾರ್ಟ್ರಿಡ್ಜ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...