alex Certify MESಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

MESಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ಬೆಳಗಾವಿಯಲ್ಲಿ ನಾಳೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನಕ್ಕೆ ಪ್ರತಿಯಾಗಿ ಎಂಇಎಸ್ ಮಹಾಮೇಳಾವ್ ಆಯೋಜನೆ ಮಾಡಿದೆ. ಎಂಇಎಸ್ ಪುಂಡಾಟ ಇದೆ ಮೊದಲಲ್ಲ, ಹೇಗೆ ಹದ್ದುಬಸ್ತಿನಲ್ಲಿಡಬೇಕೆಂದು ಗೊತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕಳೆದ 50 ವರ್ಷಗಳಿಂದ ಎಂಇಎಸ್ ಪುಂಡಾಟ ಮೆರೆಯುತ್ತಿದೆ. ಅವರನ್ನು ಯಾವರೀತಿ ಹದ್ದುಬಸ್ತಿನಲ್ಲಿಡಬೇಕು ಗೊತ್ತಿದೆ. ಅದನ್ನು ಮಾಡುತ್ತೇವೆ ಎಂದು ಹೇಳಿದ್ದಾರೆ.

ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ಬಿಜೆಪಿ ನಾಯಕರು ರಾಜಕೀಯಕ್ಕೆ ಬಳಸಿಕೊಂಡಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯನವರು ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು. ಕೆಪಿಸಿಸಿ ಅಧ್ಯಕ್ಷರ ಹೇಳಿಕೆ ಗಮನಿಸಿ ಹೇಳಿಕೆಯನ್ನು ನೀಡಬೇಕು. ಅದು ಆಕಸ್ಮಿಕ ಘಟನೆ. ಕುಕ್ಕರ್ ನಿಂದ ಆಗಿದ್ದು ಎಂದಿದ್ದಾರೆ. ಡಿ.ಕೆ.ಶಿವಕುಮಾರ್ ಮಾತನ್ನು ಮೊದಲು ಕೇಳಿಕೊಂಡು ಮಾತಾಡಲಿ ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...