ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಗೆ ಮತ್ತೊಮ್ಮೆ ಮುಖಭಂಗವಾಗಿದ್ದು, ಇಂದು ಕರೆ ನೀಡಿದ್ದ ಬೆಳಗಾವಿ ಬಂದ್ ಕರೆಗೆ ಮರಾಠಿಗರು ಯಾವುದೇ ಬೆಂಬಲ ನೀಡಿಲ್ಲ.
ಬೆಳಗಾವಿಯಲ್ಲಿ ನಿನ್ನೆಯಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೆ ಪ್ರತಿಯಾಗಿ ಎಂಇಎಸ್ ಮಹಾಮೇಳಾವ್ ಆಯೋಜಿಸಿತ್ತು. ಎಂಇಎಸ್ ನಡೆ ಖಂಡಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮೇಳ ಆಯೋಜಿಸಿದ್ದ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಮಸಿ ಬಳಿದಿದ್ದರು.
ಟ್ರೋಲ್ ಮಾಡಿದವರಿಗೆ ಸಂಯುಕ್ತಾ ಹೆಗಡೆ ಖಡಕ್ ಉತ್ತರ
ಈ ಕೃತ್ಯ ಖಂಡಿಸಿ ಎಂಇಎಸ್ ಇಂದು ಬೆಳಗಾವಿ ಬಂದ್ ಗೆ ಕರೆ ನೀಡಿತ್ತು. ಆದರೆ ಬಂದ್ ಗೆ ತಲೆಕೆಡಿಸಿಕೊಳ್ಳದ ಮರಾಠಿ ಭಾಷಿಕರು ತಮ್ಮ ಕೆಲಸದಲ್ಲಿ ನಿರತರಾಗಿದ್ದಾರೆ. ಜಿಲ್ಲೆಯಲ್ಲಿ ಎಂದಿನಂತೆ ಜನಸಂಚಾರ, ಬಸ್ ಸಂಚಾರ, ಅಂಗಡಿ ಮುಂಗಟ್ಟು, ವ್ಯಾಪಾರ-ವಹಿವಾಟು, ಶಾಲಾ-ಕಾಲೇಜುಗಳು ನಡೆಯುತ್ತಿವೆ.