ಬೆಳಗಾವಿ: ಕನ್ನಡ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಿ, ಪ್ರತಿಭಟನೆ ನಡೆಸಿದ ನಾಡದ್ರೋಹಿ ಮಹಾರಾಷ್ಟ್ರ ಏಕೀಕರಣ ಸಮಿತಿಯ 46 ಮುಖಂಡರು ಸೇರಿ ಹಲವರ ವಿರುದ್ಧ ಪ್ರಕರಣ ದಾಖಲಾಗಿದೆ.
ಮಾಜಿ ಶಾಸಕ ಮನೋಹರ ಕಿಣೇಕರ, ಎಂಇಎಸ್ ಮುಖಂಡರಾದ ಶುಭಂ ಶೆಳ್ಕೆ, ರಮಾಕಾಂತ್ ಕೊಂಡುಸ್ಕರ್, ವಿಕಾಸ್ ಕಲಘಟಗಿ, ಪ್ರಕಾಶ್ ಸೇರಿದಂತೆ 46 ಮುಖಂಡರ ವಿರುದ್ಧ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವೆಂಬರ್ 1ರಂದು ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಕರಾಳ ದಿನ ಆಚರಿಸಿ ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪ್ರತಿಭಟನೆ ನಡೆಸಿದ್ದರು. ಗಡಿ ಭಾಗದಲ್ಲಿರುವ ಮರಾಠಿ ಬಹುಭಾಷಿಕ ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರ್ಪಡೆ ಮಾಡುವಂತೆ ಘೋಷಣೆ ಕೂಗಿ ಉದ್ಧಟತನ ಪ್ರದರ್ಶಿಸಿದ್ದರು. ಅವರ ವಿರುದ್ಧ ಕನ್ನಡಪರ ಸಂಘಟನೆಗಳು ಕ್ರಮಕ್ಕೆ ಒತ್ತಾಯಿಸಿದ್ದವು.