alex Certify ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಚಳಿ ಇನ್ನಷ್ಟು ಹೆಚ್ಚಳದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಚಳಿ ಇನ್ನಷ್ಟು ಹೆಚ್ಚಳದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಚಳಿಗೆ ವಾತಾವರಣ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜನವರಿ 10ರಂದು ವಿಜಯಪುರ, ಬೀದರ್ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 3ರಿಂದ 5 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ಇರುತ್ತದೆ. ಕಲಬುರಗಿ, ಧಾರವಾಡ, ರಾಯಚೂರು, ಯಾದಗಿರಿ, ಗದಗ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ಇರಲಿದೆ.

ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ಧಾರವಾಡ, ಯಾದಗಿರಿ, ಕೊಪ್ಪಳ, ಗದಗ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12ರಿಂದ 13 ಡಿಗ್ರಿ ಸೆಲ್ಸಿಯಸ್ ನಷ್ಟು ದಾಖಲಾಗುತ್ತಿದ್ದು, ಜನವರಿ 25ರ ವರೆಗೂ ಈ ತಾಪಮಾನ ಮುಂದುವರಿಯುತ್ತದೆ. ಇದೇ ವೇಳೆ ಗರಿಷ್ಠ ತಾಪಮಾನ 28 – 29 ಡಿಗ್ರಿ ಸೆಲ್ಸಿಯಸ್ ನಷ್ಟು ಇರುತ್ತದೆ. ಮುಂದಿನ ಕೆಲವು ದಿನ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...