ಬೆಂಗಳೂರು: ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಕಡಿಮೆಯಾಗಿದ್ದ ಚಳಿಯ ಪ್ರಮಾಣ ಮತ್ತೆ ಹೆಚ್ಚಾಗತೊಡಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬಂಗಾಳ ಕೊಲ್ಲಿ ಮತ್ತು ಅರಬ್ಬಿ ಸಮುದ್ರ ಭಾಗದಲ್ಲಿ ಮಳೆ ಮಾರುತಗಳು ಸೃಷ್ಟಿಯಾಗಿದ್ದ ಕಾರಣ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆಯಾಗಿತ್ತು. ಇದೀಗ ಮಳೆಯ ಮಾರುತಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಆಕಾಶ ಶುಭ್ರವಾಗಿದೆ. ಹೀಗಾಗಿ ಕನಿಷ್ಠ ಉಷ್ಣಾಂಶದಲ್ಲಿ ಮತ್ತೆ ಇಳಿಕೆಯಾಗುತ್ತಿದ್ದು, ರಾಜ್ಯದಲ್ಲಿ ಚಳಿಯ ಪ್ರಮಾಣ ಹೆಚ್ಚುತ್ತಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.