
ಗದಗ: ಮೈಕ್ರೋ ಫೈನಾನ್ಸ್, ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಅದೇಷ್ಟೋ ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫೈನಾನ್ಸ್ ಕಿರುಕುಳದ ಬಗ್ಗೆ ದೂರು ನೀಡಿದಲ್ಲಿ ತಕ್ಷಣ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿರುವ ಬೆನ್ನಲ್ಲೇ ಎಚ್ಚೆತ್ತ ಪೊಲೀಸರು ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ.
ಗದಗ-ಬೆಟಗೇರಿ ಅವಳಿ ನಗರದಲ್ಲಿ ಇಂದು ಬೆಳ್ಳಂಬೆಳಿಗ್ಗೆಯೇ ಪೊಲೀಸರು ಬಡ್ಡಿ ದಂಧೆಕೋರರ ಮನೆಗಳ ಮೇಲೆ ದಿಡೀರ್ ದಾಳಿ ನಡೆಸಿದ್ದಾರೆ. ಅವಳಿ ನಗರದ ಹಲವೆಡೆ ಪೊಲೀಸರು ಏಕಾಏಕಿ ದಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ದಾಳಿ ವೇಳೆ ಹಲವು ಬಡ್ಡಿ ದಂಧೆಕೋರರ ಮನೆಗಳಲ್ಲಿ ಕಂತೆ ಕಂತೆ ಹಣ ಪತ್ತೆಯಾಗಿದ್ದು, ಹಲವರನ್ನು ವಶಕ್ಕೆ ಪಡೆಯಲಾಗಿದೆ. ಸಂಗಮೇಶ್, ರವಿ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟು 15 ಮನೆಗಳ ಮೇಲೆ ದಾಳಿ ನಡೆಸಲಾಗಿದ್ದು, ಲಕ್ಷ ಲಕ್ಷ ಹಣ, ಹಣ ಎಣಿಸುವ ಯಂತ್ರ, ಖಾಲಿ ಚಕ್ ಗಳನ್ನು ವಶಕ್ಕೆ ಪಡೆಯಲಾಗಿದೆ.