ಗದಗ: ಮೈಕ್ರೋ ಫೈನಾನ್ಸ್ ಗಳ ದಂಧೆ ಮತ್ತು ಮೀಟರ್ ಬಡ್ಡಿ ಮಾಫಿಯಾಗೆ ಕಡಿವಾಣ ಹಾಕಲು ಹೊಸ ಕಾಯ್ದೆ ಜಾರಿಗೆ ಸರ್ಕಾರ ನಿರ್ಧರಿಸಿದೆ ಎಂದು ಕಾನೂನು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಗಳ ಕಿರುಕುಳ ಹೆಚ್ಚಾಗಿದ್ದು, ಆತ್ಮಹತ್ಯೆ ಪ್ರಕರಣ ಜಾಸ್ತಿಯಾಗಿವೆ. ಗ್ರಾಮೀಣ ಭಾಗದ ಜನ ಮನೆ ಊರುಗಳನ್ನು ತೊರೆಯುತ್ತಿರುವ ಪ್ರಕರಣಗಳು ನಡೆಯುತ್ತಿದೆ.
ಗದಗದಲ್ಲಿ ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕುವ ಬಗ್ಗೆ ಮಾಹಿತಿ ನೀಡಿದ ಸಚಿವ ಪಾಟೀಲ್, ಮೈಕ್ರೋ ಫೈನಾನ್ಸ್ ಗಳ ದಂಧೆ, ಮೀಟರ್ ಬಡ್ಡಿ ಮಾಫಿಯಾಕ್ಕೆ ಕಡಿವಾಣ ಹಾಕಲು ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು. ಬಜೆಟ್ ಅಧಿವೇಶನದೊಳಗೆ ಮೈಕ್ರೋ ಫೈನಾನ್ಸ್ ವಿರುದ್ಧ ಕಠಿಣ ನಿಯಮ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.