alex Certify ಮೆಟ್ರೊ ಪ್ರಯಾಣಿಕರ ಗಮನಕ್ಕೆ : ನಾಳೆ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಟ್ರೊ ಪ್ರಯಾಣಿಕರ ಗಮನಕ್ಕೆ : ನಾಳೆ ಈ ಮಾರ್ಗದ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು : ಮಾರ್ಗ ಸುರಕ್ಷತಾ ಪರಿಶೀಲನೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 21 ರ ನಾಳೆ ಕೆ.ಆರ್ ಪುರದಿಂದ ಗರುಡಾಚಾರ್  ಪಾಳ್ಯ ಹಾಗೂ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೊ ರೈಲು ಸಂಚಾರದಲ್ಲಿ ವ್ಯತ್ಯಯವಾಗಲಿದೆ.

ಬೈಯಪ್ಪನಹಳ್ಳಿಯಿಂದ ಕೆ.ಆರ್ ಪುರ ಮೆಟ್ರೊ ನಿಲ್ದಾಣದ ನಡುವಿನ ಮಾರ್ಗದ ಸುರಕ್ಷತಾ ಪರಿಶೀಲನೆ ಹಿನ್ನೆಲೆಯಲ್ಲಿ ಮೆಟ್ರೊ ರೈಲು ಕಾರ್ಯಾಚರಣೆಯಲ್ಲಿ ಬದಲಾವಣೆ ಮಾಡಲಾಗಿದೆ. ನಾಳೆ ದಿನವೀಡಿ ಕೆ.ಆರ್ ಪುರ ಹಾಗೂ ಗರುಡಾಚಾರ್ ಪಾಳ್ಯ ನಿಲ್ದಾಣದವರೆಗೆ ರೈಲು ಸೇವೆ ಲಭ್ಯವಿರುವುದಿಲ್ಲ.

ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ಮೆಟ್ರೊ ರೈಲು ಸೇವೆ ಇರುವುದಿಲ್ಲ. ವೈಟ್ ಫೀಲ್ಡ್ ಗರುಡಾಚಾರ್ ಪಾಳ್ಯದ ನಡುವೆ ಎಂದಿನಂತೆ ಮೆಟ್ರೊ ರೈಲುಗಳು ಸಂಚರಿಸಲಿವೆ. ಇಂದಿರಾನಗರ ಮತ್ತು ಕೆಂಗೇರಿ ನಡುವೆ ಮಧ್ಯಾಹ್ನ 1.30 ರಿಂದ ಸಂಜೆ 4.30 ರವರೆಗೆ ರೈಲು ಸೇವೆ ಇರುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...