ಬೆಂಗಳೂರು: ಸೋಮವಾರದಿಂದ ಶೇಕಡ 60 ರಷ್ಟು ಅನ್ಲಾಕ್ ಮಾಡಿ ಶೇಕಡ 40 ರಷ್ಟು ಲಾಕ್ ಡೌನ್ ಮುಂದುವರಿಕೆ ಮಾಡಲು ಸಿಎಂ ನೇತೃತ್ವದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಕೆಎಸ್ಸಾರ್ಟಿಸಿ, ಬಿಎಂಟಿಸಿ ಸಂಚಾರಕ್ಕೆ ಅನುಮತಿ ನೀಡುವ ಬಗ್ಗೆ, ಶೇಕಡ 50 ರಷ್ಟು ಪ್ರಯಾಣಿಕರ ಸಂಚಾರಕ್ಕೆ ಅವಕಾಶ ನೀಡುವ ಬಗ್ಗೆ ಚರ್ಚೆ ನಡೆದಿದೆ. ಅದೇ ರೀತಿ ಮೆಟ್ರೋದಲ್ಲಿ ಶೇಕಡ 50ರಷ್ಟು ಪ್ರಯಾಣಿಕರ ಸಂಚಾರಕ್ಕೆ ಅವಕಾಶ ನೀಡಲು ಮತ್ತು ಮೆಟ್ರೋದಲ್ಲಿ ನಿಂತು ಪ್ರಯಾಣಿಸಲು ಅವಕಾಶ ನೀಡದಿರುವ ಬಗ್ಗೆಯೂ ಚರ್ಚೆ ನಡೆದಿದೆ ಎನ್ನಲಾಗಿದೆ.
ನೈಟ್ ಕರ್ಫ್ಯೂ ಸಮಯದಲ್ಲಿ ಬದಲಾವಣೆ ಮಾಡಲಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸುವ ಸಾಧ್ಯತೆ ಇದೆ. ಸಿಎಂ ನೇತೃತ್ವದ ಸಭೆಯಲ್ಲಿ ಅನ್ ಲಾಕ್ ಬಗ್ಗೆ ಚರ್ಚೆ ನಡೆಸಿದ್ದು, ಸಭೆಯ ಬಳಿಕ ಸಿಎಂ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಲಿದ್ದಾರೆ ಎನ್ನಲಾಗಿದೆ.