ಬೆಂಗಳೂರು: ನಮ್ಮ ಮೆಟ್ರೋಗೆ ಶೀಘ್ರದಲ್ಲಿ 21 ರೈಲುಗಳು ಸೇರ್ಪಡೆಯಾಗಲಿದ್ದು, ಪ್ರಯಾಣಿಕರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಹೊಸ ರೈಲುಗಳಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಮುಗಿದಿದ್ದು, 1,130 ಕೋಟಿ ರೂ. ವೆಚ್ಚದಲ್ಲಿ ರೈಲುಗಳು ಪೂರೈಕೆಯಾಗಲಿವೆ. ಮೆಟ್ರೋ ರೈಲಿನಲ್ಲಿ ಈಗಿರುವ ವಿಪರೀತ ದಟ್ಟಣೆ ಹೊಸ ರೈಲುಗಳು ಸೇರ್ಪಡೆಗೊಂಡ ಬಳಿಕ ಕಡಿಮೆಯಾಗಲಿದೆ ಎಂದು ಹೇಳಿದ್ದಾರೆ.
ಇಂದಿನಿಂದ ನಾಗಸಂದ್ರ – ಮಾದಾವರ ನಡುವೆ ನಮ್ಮ ಮೆಟ್ರೋ ರೈಲು ಸಂಚಾರ ಆರಂಭಗೊಂಡಿದೆ. ಬೆಳಗ್ಗೆ 5 ರಿಂದ ರಾತ್ರಿ 11 ಗಂಟೆಯವರೆಗೆ ಮೆಟ್ರೋ ಸೇವೆ ಇರಲಿದೆ. ನಾಗಸಂದ್ರ – ಮಾದಾವರ ನಡುವೆ 10 ನಿಮಿಷಕ್ಕೆ ಒಂದು ರೈಲು ಸಂಚರಿಸಲಿದೆ. ಪ್ರಯಾಣ ದರ 10 ರೂ. ನಿಂದ ಗರಿಷ್ಠ 60 ರೂ. ಇರಲಿದೆ.