ಬೆಂಗಳೂರು : ತಾಂತ್ರಿಕ ದೋಷದಿಂದ ಇಂದು ಬೆಳಗ್ಗೆ ನಮ್ಮ ಮೆಟ್ರೊ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸಲಾಗಿದ್ದು, ಸಂಚಾರ ಪುನರಾರಂಭವಾಗಿದೆ.
ನೇರಳೆ ಮಾರ್ಗದಲ್ಲಿ ತಾಂತ್ರಿಕ ದೋಷದಿಂದ ಬೆಳಗ್ಗೆ 10ರಿಂದ 11 ಗಂಟೆಯವರೆಗೆ ಎಂ.ಜಿ.ರಸ್ತೆ-ಬೈಯಪ್ಪನಹಳ್ಳಿ ನಡುವೆ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಸದ್ಯ ಬಿಎಂಆರ್ ಸಿಎಲ್ ಅಧಿಕಾರಿಗಳು ತಾಂತ್ರಿಕ ಸಮಸ್ಯೆ ಸರಿಪಡಿಸಿದ್ದು ಸಂಚಾರ ಪುನರಾರಂಭವಾಗಿದೆ.
ಬಿಎಂಆರ್ಸಿಎಲ್ ಅಧಿಕಾರಿಗಳು ಸಮಸ್ಯೆ ಬಗೆಹರಿಸಿ ಎಂಜಿ ರೋಡ್ ಮತ್ತು ಚಲ್ಲಘಟ್ಟ ನಡುವೆ ಬೈಯಪ್ಪನಹಳ್ಳಿ ಮತ್ತು ವೈಟ್‌ಫೀಲ್ಡ್ ನಡುವೆ ಸಂಚಾರ ಪುನರಾರಂಭವಾಗಿದೆ.