![](https://kannadadunia.com/wp-content/uploads/2024/11/FIR.jpg)
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದ ಬಳಿ ಎಬಿವಿಪಿ ಕಾರ್ಯಕರ್ತರು ನಿನ್ನೆ ಪ್ರತಿಭಟನೆ ನಡೆಸಿ, ಬಿ.ಎಂ.ಆರ್.ಸಿ.ಎಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಮೆಟ್ರೋ ಪ್ರಯಾಣ ದರ ಕಡಿಮೆ ಮಾಡುವಂತೆ ಒತ್ತಾಯಿಸಿದ್ದರು.
ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಎಬಿವಿಪಿಯ 16 ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಾಗಿದೆ.