
ಬೆಂಗಳೂರು: ಬೆಂಗಳೂರಿನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಿಂದಾಗಿ ನಮ್ಮ ಮೆಟ್ರೋ ಹಸಿರು ಮಾರ್ಗದಲ್ಲಿ ಕೆಲಕಾಲ ಸಂಚಾರ ಸ್ಥಗಿತಗೊಂಡಿದ್ದು, ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ಜನರು ಪರದಾಟ ನಡೆಸಿದ್ದಾರೆ. ಅರ್ಧ ಗಂಟೆ ನಂತರ ಮೆಟ್ರೋ ಸಂಚಾರ ಪುನಾರಂಭಿಸಲಾಗಿದೆ
ಜಾಲಹಳ್ಳಿ ಮೆಟ್ರೋ ಸ್ಟೇಷನ್ ನಲ್ಲಿ ಘಟನೆ ನಡೆದಿದೆ. ವ್ಯಕ್ತಿ ಹಳಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರಿಂದ ಕೆಲ ಕಾಲ ಮೆಟ್ರೋ ಸಂಚಾರ ಸ್ಥಗಿತಗೊಂಡಿತ್ತು ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.