
ಬೆಂಗಳೂರು: ಇಂದು ನಮ್ಮ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಬಿಎಂಆರ್‌ಸಿಎಲ್ ನಿಂದ ಹಳಿ ನಿರ್ವಹಣೆ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಮಾಗಡಿ ರಸ್ತೆ, ಎಂಜಿ ರಸ್ತೆ ನಡುವೆ ಮೆಟ್ರೋ ಸಂಚಾರ ಬಂದ್ ಆಗಲಿದೆ.
ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.
ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣ, ಡಾ. ಅಂಬೇಡ್ಕರ್ ನಿಲ್ದಾಣ, ವಿಧಾನಸೌಧ ನಿಲ್ದಾಣ, ವಿಶ್ವೇಶ್ವರಯ್ಯ ನಿಲ್ದಾಣ, ಸೆಂಟ್ರಲ್ ಕಾಲೇಜು, ಮೆಜೆಸ್ಟಿಕ್ ಮೆಟ್ರೋ ರೈಲು ನಿಲ್ದಾಣ ಸಂಪೂರ್ಣ ಬಂದ್ ಆಗಿರುತ್ತದೆ.
ಹಸಿರು ಹಾಗೂ ನೇರಳೆ ಮಾರ್ಗದ ಮೆಟ್ರೋ ಪ್ರಯಾಣಿಕರು ಕ್ಯೂಆರ್ ಟಿಕೆಟ್ ಹಾಗೂ ಟೋಕನ್ ಖರೀದಿಸದಂತೆ ಸೂಚನೆ ನೀಡಲಾಗಿದೆ.
ಚೆಲ್ಲಘಟ್ಟ ಮತ್ತು ಮಾಗಡಿ ರಸ್ತೆ, ಎಂಜಿ ರಸ್ತೆ ಹಾಗೂ ವೈಟ್ಫೀಲ್ಡ್ ನಡುವೆ ಎಂದಿನಂತೆ ಮೆಟ್ರೋ ಸಂಚಾರ ಇರುತ್ತದೆ.
ಹಸಿರು ಮಾರ್ಗದಲ್ಲಿ ರೇಷ್ಮೆ ಸಂಸ್ಥೆ, ಮಾದಾವರ ನಿಲ್ದಾಣದಿಂದ ಎಂದಿನಂತೆ ಮೆಟ್ರೋ ಸಂಚಾರ ಇರುತ್ತದೆ ಎಂದು ಮೆಟ್ರೋ ಸಂಚಾರ ವ್ಯತ್ಯದ ಬಗ್ಗೆ ಬಿಎಂಆರ್‌ಸಿಎಲ್ ನಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.