ಬೆಂಗಳೂರು: ಮೆಟ್ರೋ ರೈಲು ಪ್ರಯಾಣಿಕರಿಗೆ ಬಿಎಮ್ಆರ್ಸಿಎಲ್ ಸಿಹಿ ಸುದ್ದಿ ನೀಡಿದೆ. ನಾಳೆಯಿಂದಲೇ ನೇರಳೆ ಮಾರ್ಗದಲ್ಲಿ ಹೆಚ್ಚುವರಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುವುದು.
ಪ್ರಯಾಣಿಕರ ಒತ್ತಾಯದ ಮೇರೆಗೆ ಹೆಚ್ಚುವರಿ ಮೆಟ್ರೋ ರೈಲು ಸೇವೆ ಆರಂಭಿಸಲಾಗುವುದು. ನಾಳೆಯಿಂದಲೇ ಜಾರಿಗೆ ಬರುವಂತೆ ಆರು ಹೆಚ್ಚುವರಿ ರೈಲುಗಳ ಸೇರ್ಪಡೆ ಮಾಡಲಾಗುತ್ತದೆ. ನೇರಳೆ ಮಾರ್ಗದಲ್ಲಿ ಪ್ರಸ್ತುತ 9 ರೈಲುಗಳಷ್ಟೇ ಕಾರ್ಯಾಚರಣೆ ನಡೆಸುತ್ತಿದ್ದವು. ನಾಳೆಯಿಂದ ಒಟ್ಟು 15 ರೈಲುಗಳು ನೇರಳೆ ಮಾರ್ಗದಲ್ಲಿ ಕಾರ್ಯಾಚರಣೆ ನಡೆಸಲಿವೆ.
ಮೆಜೆಸ್ಟಿಕ್ ನಿಲ್ದಾಣದಿಂದ ಎಲ್ಲಾ ಹೆಚ್ಚುವರಿ ಮೆಟ್ರೋ ರೈಲುಗಳು ಸಂಚರಿಸಲಿವೆ. ನಾಳೆಯಿಂದ ನೇರಳೆ ಮಾರ್ಗದಲ್ಲಿ ಪ್ರತಿ 3.5 ನಿಮಿಷಕ್ಕೊಂದು ರೈಲುಗಳು ಸಂಚಾರ ಇರುತ್ತದೆ. ಇನ್ನುಳಿದಂತೆ ಮೆಟ್ರೋ ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ ನಿಂದ ಮಾಧ್ಯಮ ಪ್ರಕಟಣೆ ನೀಡಲಾಗಿದೆ.