
ತುಮಕೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮತ್ತೋರ್ವ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟೋ ಚಾಲಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಅಂಜನಮೂರ್ತಿ (35) ಆತ್ಮಹತ್ಯೆಗೆ ಶರಣಾದವರು. ಅಂಜನಮೂರ್ತಿ ಬಟವಾಡಿಯ ಮಹಾಲಕ್ಷ್ಮೀ ನಗರದ ನಿವಾಸಿ. ಬಡ್ಡಿ ಹಣ ನೀಡುವಂತೆ ಫೈನಾನ್ಸ್ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸತ್ತ ಅಂಜನಮೂರ್ತಿ, ವಿಡಿಯೋ ಮಾಡಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ತುಮಕೂರಿನ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.