alex Certify BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ ಸಚಿವ ಹೆಚ್.ಕೆ.ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ: ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದ ಸಚಿವ ಹೆಚ್.ಕೆ.ಪಾಟೀಲ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕಿರುಕುಳಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಾನೂನು ಜಾರಿಗೆ ಮುಂದಾಗಿದ್ದು, ಇಂದು ವಿಧಾನಸಭೆಯಲ್ಲಿ ಮಸೂದೆ ಮಂಡಿಸಲಾಯಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಸಚಿವ ಹೆಚ್.ಕೆ.ಪಾಟೀಲ್, ವಿಧೇಯಕವನ್ನು ಮಂಡಿಸಿದರು. ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು ಸಣ್ಣ ಸಾಲ (ಬಲವಂತದ ಕ್ರಮಗಳ ಪ್ರತಿಬಂಧಕ) ವಿಧೇಯಕ-2025ನ್ನು ಮಂಡಿಸಿದರು.

ಸಾಲಗಳನ್ನು ಪಡೆಯುವವರ ಹಾಗೂ ಸಾಲದಲ್ಲಿ ಮುಳುಗಿರುವವರನ್ನು ರಕ್ಷಿಸುವುದು ವಿಧೇಯಕದ ಉದ್ದೇಶ. ಬಡ, ಗ್ರಾಮೀಣ ನಿರ್ಗತಿಕರು, ನಗರ ಕಾರ್ಮಿಕರು, ಸಮಾಜದ ಅಶಕ್ತ ಮತ್ತು ದುರ್ಬಲ ವರ್ಗದವರನ್ನು ಪೀಡಿಸಲಾಗುತ್ತಿದೆ. ಕೆಲವೊಮ್ಮೆ ಹೆಚ್ಚುಇನ ಬಡ್ಡಿ ಕಟ್ಟುವಂತೆ ಒತ್ತಾಯಿಸಲಾಗುತ್ತಿದೆ. ಲೇವಾದೇವಿದಾರರ ಕಾರಣದಿಂದಾಗಿ ಸಾಲಗಾರರು ಬೀದಿಗೆ ಬರುವಂತಾಗಿದೆ. ಹಾಗೂ ಆತ್ಮಹತ್ಯೆಯಂತಹ ನಿರ್ಧಾರ ಮಾಡುತ್ತಿದ್ದಾರೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಸೂದೆ ಜಾರಿಗೆ ತರಲಾಗುವುದು ಎಂದು ವಿಧೇಯಕದಲ್ಲಿ ಪ್ರಸ್ತಾಪಿಸಲಾಗಿದೆ.

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...